John 11:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
Kannada BSI Bible 2016
ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.
Kannada Bible (KNCL) BSI 2016
“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.