John 11:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
Kannada BSI Bible 2016
ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು - ಗುರುವು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
Kannada Bible (KNCL) BSI 2016
ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.