John 11:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
Kannada BSI Bible 2016
ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಿಯಳ ಕೂಡ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು - ಆಕೆ ತಟ್ಟನೆ ಎದ್ದು ಹೊರಗೆ ಹೋಗುವದನ್ನು ಕಂಡು ಈಕೆ ಅಳುವದಕ್ಕಾಗಿ ಸಮಾಧಿಗೆ ಹೋಗುತ್ತಾಳೆಂದು ನೆನಸಿ ಆಕೆಯ ಹಿಂದೆ ಹೋದರು.
Kannada Bible (KNCL) BSI 2016
ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.