John 11:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
Kannada BSI Bible 2016
ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಕ್ಕೆ ಬಿದ್ದು - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ ಅಂದಳು.
Kannada Bible (KNCL) BSI 2016
ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.