John 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
Kannada BSI Bible 2016
ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ -
Kannada Bible (KNCL) BSI 2016
ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,