John 11:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದ್ಯರು, “ನೋಡಿ! ಯೇಸು ಅವನನ್ನು ಬಹಳವಾಗಿ ಪ್ರೀತಿಸುತ್ತಿದ್ದನು!” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
Kannada BSI Bible 2016
ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ನೋಡಿ - ಆಹಾ, ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದನು ಅಂದುಕೊಂಡರು.
Kannada Bible (KNCL) BSI 2016
ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.