John 11:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
Kannada BSI Bible 2016
ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನಲ್ಲಿ ತಿರಿಗಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲು ಆನಿಸಿತ್ತು.
Kannada Bible (KNCL) BSI 2016
ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.