John 11:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
Kannada BSI Bible 2016
ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ಆ ಕಲ್ಲನ್ನು ತೆಗೆದುಹಾಕಿರಿ ಅನ್ನಲು ತೀರಿಹೋದವನ ಅಕ್ಕನಾದ ಮಾರ್ಥಳು - ಸ್ವಾಮೀ, ಅವನು ಸತ್ತು ನಾಲ್ಕು ದಿವಸವಾಯಿತು; ಈಗ ನಾತ ಹುಟ್ಟಿದೆ ಅಂದಳು.
Kannada Bible (KNCL) BSI 2016
ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.