John 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
Kannada BSI Bible 2016
ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.
Kannada Bible (KNCL) BSI 2016
ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.