John 11:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
Kannada BSI Bible 2016
ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.
Kannada Bible (KNCL) BSI 2016
ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.