John 11:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
Kannada BSI Bible 2016
ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.
Kannada Bible (KNCL) BSI 2016
ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.