John 11:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
Kannada BSI Bible 2016
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;
Kannada Bible (KNCL) BSI 2016
ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?