John 11:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
Kannada BSI Bible 2016
ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.
Kannada Bible (KNCL) BSI 2016
ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.