John 11:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
Kannada BSI Bible 2016
ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನವೆಲ್ಲಾ ನಾಶವಾಗುವದಕ್ಕಿಂತ ಒಬ್ಬ ಮನುಷ್ಯನು ಜನಕ್ಕೋಸ್ಕರ ಸಾಯುವದು ನಿಮಗೆ ಹಿತವೆಂದು ನೀವು ಆಲೋಚಿಸುವದೂ ಇಲ್ಲ ಎಂಬದಾಗಿ ಹೇಳಿದನು.
Kannada Bible (KNCL) BSI 2016
“ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.