John 11:54 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
Kannada BSI Bible 2016
ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಲ್ಲಿ ಶಿಷ್ಯರ ಸಂಗಡ ಇದ್ದನು.
Kannada Bible (KNCL) BSI 2016
ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.