John 11:55 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
Kannada BSI Bible 2016
ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು.
Kannada Bible (KNCL) BSI 2016
ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.