John 11:56 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅಲ್ಲಿ ಯೇಸುವನ್ನು ಹುಡುಕತೊಡಗಿದರು. ಅವರು ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುವನೇ? ನಿಮ್ಮ ಆಲೋಚನೆ ಏನು?” ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
Kannada BSI Bible 2016
ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು - ಅವನು ಹಬ್ಬಕ್ಕೆ ಬಾರದೆ ಇದ್ದಾನೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮಲ್ಲಿ ಮಾತಾಡಿಕೊಳ್ಳುತ್ತಾ ಇದ್ದರು.
Kannada Bible (KNCL) BSI 2016
ಯೇಸುವನ್ನು ನೋಡಬೇಕೆಂಬ ಆಶೆ ಅವರಿಗಿತ್ತು. “ಆತ ಹಬ್ಬಕ್ಕೆ ಬರುತ್ತಾನೋ ಇಲ್ಲವೋ ನಿಮ್ಮ ಎಣಿಕೆ ಏನು?” ಎಂದು ಮಹಾದೇವಾಲಯದಲ್ಲಿ ತಮ್ಮತಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುತ್ತಾನೋ ಇಲ್ಲವೋ? ನಿಮಗೆ ಹೇಗೆ ಕಾಣುತ್ತದೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.