John 11:57 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
Kannada BSI Bible 2016
ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯಬೇಕೆಂಬದಾಗಿ ಯೋಚಿಸಿ - ಅವನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
Kannada Bible (KNCL) BSI 2016
ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.