John 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಲಾಜರನು ಅಸ್ವಸ್ಥನಾಗಿದ್ದಾನೆ’ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
Kannada BSI Bible 2016
ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆ ಎರಡು ದಿನ ತಾನಿದ್ದ ಸ್ಥಳದಲ್ಲೇ ನಿಂತನು.
Kannada Bible (KNCL) BSI 2016
ಲಾಸರನ ಕಾಯಿಲೆಯ ಸುದ್ದಿಯನ್ನು ಕೇಳಿದ ಮೇಲೂ ಯೇಸು ತಾವಿದ್ದಲ್ಲಿಯೇ ಇನ್ನೂ ಎರಡು ದಿನ ಉಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.