John 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
Kannada BSI Bible 2016
ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು
Kannada Bible (KNCL) BSI 2016
ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.