John 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
Kannada BSI Bible 2016
ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಸ್ಕಹಬ್ಬವು ಇನ್ನು ಆರು ದಿವಸ ಮುಂದೆ ಇರಲಾಗಿ ಯೇಸು ಬೇಥಾನ್ಯಕ್ಕೆ ಬಂದನು. ಯೇಸುವು ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಅಲ್ಲಿದ್ದನು.
Kannada Bible (KNCL) BSI 2016
ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.