John 12:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
Kannada BSI Bible 2016
ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.
Kannada Bible (KNCL) BSI 2016
ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ! ಇಸ್ರಯೇಲಿನ ಅರಸನಿಗೆ ಶುಭವಾಗಲಿ!’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ! ” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.