John 12:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
Kannada BSI Bible 2016
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು.
Kannada Bible (KNCL) BSI 2016
ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.