John 12:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
Kannada BSI Bible 2016
ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಬದುಕಿಸಿದ ವೇಳೆಯಲ್ಲಿ ಆತನ ಸಂಗಡ ಇದ್ದ ಜನರು ಅದನ್ನು ಸಾರುತ್ತಿದ್ದರು.
Kannada Bible (KNCL) BSI 2016
ಇದಲ್ಲದೆ ಯೇಸು ಲಾಸರನನ್ನು ಸಮಾಧಿಯಿಂದ ಹೊರಗೆ ಕರೆದು ಸಾವಿನಿಂದ ಜೀವಕ್ಕೆ ಎಬ್ಬಿಸಿದಾಗ ಅವರ ಸಂಗಡ ಇದ್ದವರು ನಡೆದ ವಿಷಯವನ್ನು ಇತರರಿಗೆ ಸಾರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.