John 12:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Kannada BSI Bible 2016
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Kannada Bible (KNCL) BSI 2016
ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ!” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.