John 12:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೇಸುವಿಗೆ ರಾತ್ರಿಭೋಜನವನ್ನು ಏರ್ಪಡಿಸಿದ್ದರು. ಮಾರ್ಥಳು ಊಟವನ್ನು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟ ಮಾಡುತ್ತಿದ್ದವರಲ್ಲಿ ಲಾಜರನೂ ಒಬ್ಬನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
Kannada BSI Bible 2016
ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವಿಗೆ ಅಲ್ಲಿ ಔತಣಮಾಡಿಸಲು ಮಾರ್ಥಳು ನೆರವಾಗಿದ್ದಳು; ಲಾಜರನು ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು.
Kannada Bible (KNCL) BSI 2016
ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.