John 12:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
Kannada BSI Bible 2016
ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಪ್ರಾಣದ ಮೇಲೆ ಮಮತೆಯಿಡುವವನು ಅದನ್ನು ಕಳಕೊಳ್ಳುವನು, ಇಹಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
Kannada Bible (KNCL) BSI 2016
ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.