John 12:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
Kannada BSI Bible 2016
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.
Kannada Bible (KNCL) BSI 2016
ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?