John 12:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
Kannada BSI Bible 2016
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.
Kannada Bible (KNCL) BSI 2016
ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.