John 12:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
Kannada BSI Bible 2016
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು; ಅದೇನಂದರೆ - ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಬಾಹುವು ಯಾರಿಗೆ ಗೋಚರವಾಯಿತು? ಎಂಬದು.
Kannada Bible (KNCL) BSI 2016
ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.
Recommended Reading