John 12:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಗಟ್ಟಿಯಾಗಿ ಹೀಗೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
Kannada BSI Bible 2016
ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ.
Kannada Bible (KNCL) BSI 2016
ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು: “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.