John 12:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
Kannada BSI Bible 2016
ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ನನ್ನ ಮಾತುಗಳನ್ನು ಕೇಳಿದರೂ ಕೈಕೊಂಡು ನಡೆಯದೆ ಹೋದರೆ ನಾನೇ ಅವನಿಗೆ ತೀರ್ಪುಮಾಡುವದಿಲ್ಲ; ಲೋಕಕ್ಕೆ ತೀರ್ಪುಮಾಡುವದಕ್ಕಾಗಿ ನಾನು ಬಂದಿಲ್ಲ; ಲೋಕವನ್ನು ರಕ್ಷಿಸುವದಕ್ಕಾಗಿ ಬಂದಿದ್ದೇನೆ.
Kannada Bible (KNCL) BSI 2016
ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.