John 12:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
Kannada BSI Bible 2016
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಲಕ್ಷ್ಯಮಾಡದೆ ನನ್ನ ಮಾತುಗಳನ್ನು ಅಂಗೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದು ಒಂದು ಇದೆ, ಅದು ಯಾವದಂದರೆ, ನಾನು ಆಡಿದ ಮಾತು; ಅದೇ ಅವನಿಗೆ ಕಡೇ ದಿನದಲ್ಲಿ ತೀರ್ಪುಮಾಡುವದು.
Kannada Bible (KNCL) BSI 2016
ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.