John 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
Kannada BSI Bible 2016
ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.
Kannada Bible (KNCL) BSI 2016
ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.