John 12:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನಿಗೆ, “ಆಕೆಯನ್ನು ತಡೆಯಬೇಡ. ನನ್ನನ್ನು ಶವಸಂಸ್ಕಾರಕ್ಕೆ ಸಿದ್ಧಪಡಿಸುವ ಈ ದಿನಕ್ಕೋಸ್ಕರ ಆಕೆ ಸುಗಂಧ ದ್ರವ್ಯವನ್ನು ಶೇಖರಿಸಿದ್ದು ಒಳ್ಳೆಯದೇ ಸರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
Kannada BSI Bible 2016
ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು - ಈಕೆಯನ್ನು ಬಿಡು; ನನ್ನನ್ನು ಹೂಣಿಡುವ ದಿವಸಕ್ಕಾಗಿ ಅದನ್ನು ಇಟ್ಟುಕೊಳ್ಳಲಿ.
Kannada Bible (KNCL) BSI 2016
ಆಗ ಯೇಸು, “ಆಕೆಯ ಗೊಡವೆ ನಿನಗೆ ಬೇಡ. ನನ್ನ ಶವಸಂಸ್ಕಾರದ ದಿನಕ್ಕಾಗಿ ಆಕೆ ಅದನ್ನು ಇಟ್ಟುಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.