John 12:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಬೆಥಾನಿಯಲ್ಲಿದ್ದಾನೆ ಎಂಬ ಸುದ್ದಿಯನ್ನು ಅನೇಕ ಯೆಹೂದ್ಯರು ಕೇಳಿ ಆತನನ್ನೂ ಲಾಜರನನ್ನೂ ನೋಡಬೇಕೆಂದು ಅಲ್ಲಿಗೆ ಹೋದರು. ಯೇಸುವಿನಿಂದ ಜೀವಂತವಾಗಿ ಎಬ್ಬಿಸಲ್ಪಟ್ಟವನೇ ಲಾಜರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
Kannada BSI Bible 2016
ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಜನಸಮೂಹವು ಆತನು ಅಲ್ಲಿ ಇದ್ದಾನೆಂದು ತಿಳಿದು ಯೇಸುವನ್ನು ನೋಡುವದಕ್ಕಾಗಿ ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನು ಸಹ ನೋಡಬೇಕೆಂಬದಾಗಿ ಬಂದರು.
Kannada Bible (KNCL) BSI 2016
ಯೇಸು ಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡ ಗುಂಪು ಬಂದಿತು. ಯೇಸುವನ್ನು ಮಾತ್ರವಲ್ಲ, ಅವರು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಲಾಸರನನ್ನೂ ಕಾಣಲು ಆ ಜನರು ಅಲ್ಲಿಗೆ ಬಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.