John 13:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
Kannada BSI Bible 2016
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.
Kannada Bible (KNCL) BSI 2016
ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.