John 13:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
Kannada BSI Bible 2016
ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ಸ್ನಾನಮಾಡಿಕೊಂಡವನ ಕಾಲುಗಳನ್ನು ತೊಳೆಯುವದಲ್ಲದೆ ಬೇರೇನೂ ತೊಳೆಯಬೇಕಾಗಿರುವದಿಲ್ಲ, ಅವನ ಮೈಯೆಲ್ಲಾ ಶುದ್ಧವಾಗಿದೆ. ನೀವೂ ಶುದ್ಧರಾಗಿದ್ದೀರಿ; ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದು ಹೇಳಿದನು.
Kannada Bible (KNCL) BSI 2016
ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.