John 13:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಹೀಗೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
Kannada BSI Bible 2016
ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರ ಕಾಲುಗಳನ್ನು ತೊಳೆದ ಮೇಲೆ ತನ್ನ ಮೇಲ್ಹೊದಿಕೆಯನ್ನು ಹಾಕಿಕೊಂಡು ತಿರಿಗಿ ಕೂತುಕೊಂಡು ಅವರಿಗೆ ಹೇಳಿದ್ದೇನಂದರೆ - ನಾನು ನಿಮಗೆ ಮಾಡಿದ್ದು ಏನೆಂದು ಗೊತ್ತಾಯಿತೋ?
Kannada Bible (KNCL) BSI 2016
ಶಿಷ್ಯರ ಪಾದಗಳನ್ನು ತೊಳೆದ ಮೇಲೆ ಯೇಸು ತಮ್ಮ ಮೇಲುಹೊದಿಕೆಯನ್ನು ಹಾಕಿಕೊಂಡು ಕುಳಿತುಕೊಂಡರು. ತಮ್ಮ ಶಿಷ್ಯರಿಗೆ, “ನಿಮಗೆ, ನಾನು ಮಾಡಿರುವುದು ಏನೆಂದು ಅರ್ಥವಾಯಿತೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತಮ್ಮ ಮೇಲು ಹೊದಿಕೆಯನ್ನು ಧರಿಸಿ, ತಮ್ಮ ಸ್ಥಳದಲ್ಲಿ ಕುಳಿತುಕೊಂಡು ಅವರಿಗೆ, “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೋ?