John 13:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
Kannada BSI Bible 2016
ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೂ ಗುರುವೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದಿರಲಾಗಿ ನೀವು ಸಹ ಒಬ್ಬರ ಕಾಲನ್ನು ಒಬ್ಬರು ತೊಳೆಯುವ ಹಂಗಿನವರಾಗಿದ್ದೀರಿ.
Kannada Bible (KNCL) BSI 2016
ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.