John 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
Kannada BSI Bible 2016
ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
Kannada Bible (KNCL) BSI 2016
“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.