John 13:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.
Kannada BSI Bible 2016
ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನಡೆಯುವಾಗ ನನ್ನನ್ನೇ ಆತನೆಂದು ನೀವು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆ ಅದನ್ನು ಇಂದಿನಿಂದ ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.