John 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
Kannada BSI Bible 2016
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.
Kannada Bible (KNCL) BSI 2016
(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.