John 13:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
Kannada BSI Bible 2016
ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.
Kannada Bible (KNCL) BSI 2016
ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”