John 13:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.
Kannada BSI Bible 2016
ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಹೇಳಿ ಯೇಸು ಆತ್ಮದಲ್ಲಿ ತತ್ತರಗೊಂಡು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ಸ್ಪಷ್ಟವಾಗಿ ಹೇಳಿದನು.
Kannada Bible (KNCL) BSI 2016
ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.