John 13:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.
Kannada BSI Bible 2016
ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನಿಗೆ ಸೀಮೋನ ಪೇತ್ರನು ಸನ್ನೆಮಾಡಿ - ಯಾರನ್ನು ಕುರಿತು ಮಾತಾಡಿದನು, ತಿಳಿಸು ಎಂದು ಹೇಳಿದನು.
Kannada Bible (KNCL) BSI 2016
ಸಿಮೋನಪೇತ್ರನು, “ಯಾರನ್ನು ಕುರಿತು ಹಾಗೆ ಹೇಳುತ್ತಿದ್ದಾರೆಂದು ಕೇಳು,” ಎಂದು ಸನ್ನೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು.