John 13:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
Kannada BSI Bible 2016
ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ನಾನು ಈ ತುತ್ತನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ ಎಂದು ಹೇಳಿ ಆ ತುತ್ತನ್ನು ಅದ್ದಿ ತೆಗೆದು ಸೀಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.
Kannada Bible (KNCL) BSI 2016
ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.