John 13:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.
Kannada BSI Bible 2016
ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.
Kannada Bible (KNCL) BSI 2016
ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.