John 13:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
Kannada BSI Bible 2016
ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕೆಲವರು - ಯೂದನ ವಶದಲ್ಲಿ ಹಣದ ಚೀಲವಿದ್ದದರಿಂದ ಹಬ್ಬಕ್ಕಾಗಿ ನಮಗೆ ಬೇಕಾದದ್ದನ್ನು ಕೊಂಡುಕೋ ಎಂಬದಾಗಿಯೋ ಬಡವರಿಗೆ ಏನಾದರೂ ಕೊಡು ಎಂಬದಾಗಿಯೋ ಯೇಸು ಅವನಿಗೆ ಹೇಳುತ್ತಾನೆ ಎಂದು ನೆನಸಿದರು.
Kannada Bible (KNCL) BSI 2016
ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.