John 13:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
Kannada BSI Bible 2016
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು
Kannada Bible (KNCL) BSI 2016
ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.